ಉನ್ನತ ಶಿಕ್ಷಣ ಪಡೆಯಲು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2023-24 ಸಾಲಿನ ವಿದ್ಯಾರ್ಥಿ ವೇತನ

Education JAINISM

Posted by admin on 2023-10-25 13:20:30 |


ಉನ್ನತ ಶಿಕ್ಷಣ ಪಡೆಯಲು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2023-24 ಸಾಲಿನ ವಿದ್ಯಾರ್ಥಿ ವೇತನ

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯ ಮುಖಾಂತರ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಮಾತ್ರ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಗಳಲ್ಲಿ ವಿದೇಶಿ ವ್ಯಾಸಂಗ ಮಾಡಲು ಹಣಕಾಸಿನ ನೆರವು (ವಿದ್ಯಾರ್ಥಿ ವೇತನ ರೂಪದಲ್ಲಿ) ನೀಡಲಾಗುತ್ತದೆ. 2023-2024 ಶೈಕ್ಷಣಿಕ ವರ್ಷಕ್ಕೆ ಜಾಗತಿಕ ವಿಶ್ವ ಶ್ರೇಯಾಂಕ ಪಟ್ಟಿಯ ಅನುಸಾರ ಉನ್ನತ ಶಿಕ್ಷಣಕ್ಕಾಗಿ ಉನ್ನತ-500 ವಿಶ್ವವಿದ್ಯಾಲಗಳನ್ನು ಪರಿಗಣಿಸಲಾಗುತ್ತದೆ.

ಕರ್ನಾಟಕ ರಾಜ್ಯ ನಿವಾಸದ ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು https://sevasindhu.karnataka.gov.in ಮೂಲಕ ದಾಖಲೆಗಳೊಂದಿಗೆ ಆನ್ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-11-2023 ಆಗಿರುತ್ತದೆ. ಹೆಚ್ಚಿನ ಮಾಹಿತಿ ಮತ್ತು ಷರತ್ತುಗಳಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಅಧಿಕೃತ ವೆಬ್ ಸೈಟ್ https://dom.karnataka.gov.in ಅಥವಾ ಸಹಾಯವಾಣಿ ಸಂಖ್ಯೆ 82777 99990 ಗೆ ಸಂಪರ್ಕಿಸುವಂತೆ ಸೂಚಿಸಲಾಗಿದೆ. ಆದ ಕಾರಣ ಎಲ್ಲ ಜೈನ ಸಮುದಾಯದ ಅಭ್ಯರ್ಥಿಗಳು ಇದರ ಲಾಭವನ್ನು ಪಡೆದುಕೊಳ್ಳಬೇಕಾಗಿ ವಿನಂತಿ. 

Recent News
Leave a Comment: