ಜೈನ ಸಂಪ್ರದಾಯದಂತೆ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ಅಂತ್ಯಕ್ರಿಯೆ
General JAINISM

Posted by admin on 2023-05-10 15:00:05 |

Share: Facebook | Twitter | Whatsapp | Linkedin


ಜೈನ ಸಂಪ್ರದಾಯದಂತೆ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ಅಂತ್ಯಕ್ರಿಯೆ

ಹಾಸನ, ಮಾರ್ಚ್‌, 23: ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಚಿತೆಗೆ ಅಗ್ನಿಸ್ಪರ್ಶ ಮಾಡಲಾಗಿದೆ. ಚಂದ್ರಗಿರಿ ಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಸೂರ್ಯಾಸ್ತಕ್ಕೂ ಮೊದಲು ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ.

ಜೈನ ಮಠದ ಸಾವಿರಾರು ಭಕ್ತಾದಿಗಳು ಚಾರೂಕೀರ್ತಿ ಭಟ್ಟಾರಕ ಮಹಾಸ್ವಾಮಿಗಳ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಗುರುವಾರ ವಿಧಿವಶರಾಗಿದ್ದರು. ಬೆಳ್ಳೂರು ಕ್ರಾಸ್‌ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿದ್ದ ಸ್ವಾಮೀಜಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದರು.

ಇತಿಹಾಸ ತಜ್ಞರು, ತತ್ವ ಜ್ಞಾನಿಗಳು ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Search
Recent News
Leave a Comment:

ಕೃತಿಸ್ವಾಮ್ಯ © ಜೈನ ವಾಣಿ 2024